ಬಂಟ್ವಾಳ: ಕೊರೋನ ಸೋಂಕಿನಿಂದ ಮೃತಪಟ್ಟ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ ಮಹಿಳೆಯ ಶವ ಸಂಸ್ಕಾರವು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬಿ.ಸಿ.ರೋಡ್ ರೈಲು ನಿಲ್ದಾಣ ಸಮೀಪದ ಕೈಕುಂಜೆ ಹಿಂದೂ ರುದ್ರ ಭೂಮಿಯಲ್ಲಿ ನಿನ್ನೆ ರಾತ್ರಿ ನಡೆಯಿತು. ಮೊದಲು ಮಹಿಳೆಯ ಶವ ಸಂಸ್ಕಾರ ವಾಮಂಜೂರಿನ ಪಚ್ಚನಾಡಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತಾದರೂ ಸ್ಥಳೀಯರು ವಿರೋಧಿಸಿದ್ದರು. ಪಚ್ಚನಾಡಿಯಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಂಟ್ವಾಳದ ಕೈಕುಂಜೆಯಲ್ಲಿ ಶವ ಸಂಸ್ಕಾರವನ್ನು ನಡೆಸಿದ್ದರು.










