ಬಂದ್ ನಿಂದ ಜನರಿಗೆ ತೊಂದರೆ ಆಗಬಾರದು : ಸಿಎಂ ಬೊಮ್ಮಾಯಿ.

76
firstsuddi

ಹುಬ್ಬಳ್ಳಿ : ಕೊವಿಡ್ ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು. ಬಂದ್ ನಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನಗರದಲ್ಲಿಂದು ಕೆಎಲ್ ಇ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ನಿಮ್ಮ ವೈಚಾರಿಕತೆಯ ಹಿನ್ನೆಲೆಯಲ್ಲಿ ಹೋರಾಟ ಮಾಡಿ ಎಂದರು.

ಭಾರತ ಬಂದ್​ಗೆ ಕಾಂಗ್ರೆಸ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಅಧಿವೇಶನದಲ್ಲಿಯೂ ಹೇಳಿದ್ದೇನೆ. ಈಗಲೂ ಹೇಳುತ್ತಿದ್ದೇನೆ. ಕಾಂಗ್ರೆಸ್ ವಿಪಕ್ಷವಾಗಿ ಭಾರತ ಬಂದ್​ಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.