ಬಡತನ ಕಡಿಮೆ ಮಾಡಲು ಅಲ್ಪಸಂಖ್ಯಾತ ಸಮುದಾಯವು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕು : ಅಸ್ಸಾಂ ಸಿಎಂ.

104
firstsuddi

ಗುವಾಹಟಿ : ಬಡತನವನ್ನು ಕಡಿಮೆ ಮಾಡಲು ಅಲ್ಪಸಂಖ್ಯಾತ ಸಮುದಾಯವು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಅವರು ಸಲಹೆ ನೀಡಿದ್ದಾರೆ.

ಜನಸಂಖ್ಯೆ ಹೆಚ್ಚಳದಿಂದಾಗಿ ಅಲ್ಪಸಂಖ್ಯಾತರಲ್ಲಿ ಬಡತನ ಹೆಚ್ಚಾಗುತ್ತಿದೆ. ಹೀಗಾಗಿ ಬಡತನವನ್ನು ಕಡಿಮೆ ಮಾಡಲು ಸಮುದಾಯದ ಜನ ಮುಂದೆ ಬರಬೇಕು ಎಂದು ಮುಖ್ಯಮಂತ್ರಿಗಳು, ತಮ್ಮ ಸರ್ಕಾರ ಒಂದು ತಿಂಗಳು ಪೂರ್ಣಗೊಂಡ ಸಂದರ್ಭದಲ್ಲಿ ಹೇಳಿದರು.

ಜನಸಂಖ್ಯೆ ಬೆಳವಣಿಗೆಯ ಸಮಸ್ಯೆಯನ್ನು ನಿಭಾಯಿಸುವಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೆಂಬಲ ಬೇಕು. ಸಮುದಾಯದ ಮಹಿಳೆಯರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತದೆ. ನಾವು ಜನಸಂಖ್ಯೆಯನ್ನು ನಿಯಂತ್ರಿಸಿದರೆ ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.