ಬರಗಾಲದ ಕುರಿತು ನಿನ್ನೆ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಾ.ಜಿ ಪರಮೇಶ್ವರ್ ಟ್ವೀಟ್…

183
firstsuddi

ಬೆಂಗಳೂರು : ತುಮಕೂರು ಜಿಲ್ಲೆಯಲ್ಲಿ ಉಂಟಾಗುತ್ತಿರುವ ಬರಗಾಲದ ಸಮಸ್ಯೆಗಳನ್ನು ಕುರಿತು ನಿನ್ನೆ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದು, ತುಮಕೂರು ಜಿಲ್ಲೆಯ ಹಲವೆಡೆಯಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದ್ದೇವೆ. ಅಲ್ಲದೆ ಜನರಿಗಾಗಿ ಸಹಾಯವಾಣಿ ತೆರೆಯಲಾಗಿದೆ. ಜನರು ಬರಗಾಲ ಸಂಬಂಧ ಏನೇ ಸಮಸ್ಯೆ ಇದ್ದರೂ ಈ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ತೋಡಿಕೊಳ್ಳಬಹುದು. ನೆನ್ನೆ ಜಿಲ್ಲೆಯಲ್ಲಿ ಬರಗಾಲ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ ಎಂದು ಟ್ವೀಟ್ ಮಾಡಿದ್ದಾರೆ.