ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಮುಂದಾದ ಪತಿಯ ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ!

105
firstsuddi

ಭೋಪಾಲ್ : ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಮಧ್ಯಪ್ರದೇಶದ ಟಿಕಮ್ ಗಢ ಜಿಲ್ಲೆಯಲ್ಲಿ ಡಿಸೆಂಬರ್ 7ರಂದು ನಡೆದಿದ್ದು, 24 ವರ್ಷದ ಪತ್ನಿ 26 ವರ್ಷದ ತನ್ನ ಗಂಡನ ಮರ್ಮಾಂಗವನ್ನು ಕತ್ತರಿಸಿ ಬಿಟ್ಟಿದ್ದಾಳೆ.

ಪತಿ ಹಾಗೂ ಪತ್ನಿ ಮಧ್ಯೆ ದೈಹಿಕ ಸಂಬಂಧದ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಹೀಗಿರುವಾಗಿ ಪತಿ ಪ್ರತಿನಿತ್ಯ ಸೆಕ್ಸ್ ಮಾಡುವಂತೆ ಒತ್ತಡ ಹೇರುತ್ತಿದ್ದನು. ಆದರೆ ಇದು ಪತ್ನಿಗೆ ಇಷ್ಟವಿರಲಿಲ್ಲ. ಹೀಗಾಗಿ ಬಲವಂತವಾಗಿ ಸೆಕ್ಸ್ ಮಾಡಲು ಮುಂದಾದಾಗ ಸಿಟ್ಟಿನಿಂದ ಪತ್ನಿ ಈ ಕೃತ್ಯ ಎಸಗಿದ್ದಾಳೆ. ಈ ಘಟನೆ ಡಿ.7ರಂದು ರಾತ್ರಿ ನಡೆದಿದ್ದು, ಕೂಡಲೇ ಆತ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾನೆ. ಡಿ.13ರಂದು ಸಂತ್ರಸ್ತ ಠಾಣೆಗೆ ಬಂದು ದೂರು ನೀಡಿದ್ದಾನೆ. ಈ ದಂಪತಿ 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಮದುವೆಯಾದ ಕೆಲ ತಿಂಗಳಿನಿಂದಲೇ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿದೆ. ಪರಿಣಾಮ ಇಬ್ಬರೂ ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದರು. ಈ ಮಧ್ಯೆ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಂತೆ ಪತ್ನಿ ವಿರುದ್ಧ ಐಪಿಸಿ ಸೆಕ್ಷನ್ 324ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.