ಬಳ್ಳಾರಿ ಜಿಲ್ಲೆ ವಿಭಜನೆಯಾದರೆ ನಾಲ್ವರು ಶಾಸಕರು ರಾಜಿನಾಮೆ ನೀಡಬೇಕಾಗುತ್ತದೆ : ಸೋಮಶೇಖರ ರೆಡ್ಡಿ ಎಚ್ಚರಿಕೆ…

195
firstsuddi

ಬಳ್ಳಾರಿ : ಬಳ್ಳಾರಿ ಜಿಲ್ಲೆಯನ್ನು ಎರಡು ಭಾಗ ಮಾಡಿ ವಿಜಯನಗರವನ್ನು ಜಿಲ್ಲೆ ಎಂದು ಘೋಷಣೆ ಮಾಡುವ ಪ್ರಕ್ರಿಯೆ ಸರ್ಕಾರದಿಂದ ಮುಂದುವರೆದಿದ್ದು, ಈ ಕುರಿತು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಅವರು ರಾಜಿನಾಮೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆಯನ್ನು ಘೋಷಣೆ ಮಾಡಬಾರದು. ಈ ಜಿಲ್ಲೆಯಲ್ಲಿ ನಾಲ್ಕು ಮಂದಿ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದ ಯಡಿಯೂರಪ್ಪ ಅವರು ಚರ್ಚೆ ಮಾಡಬೇಕು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ. ಆದರೂ ಬಳ್ಳಾರಿ ವಿಭಜನೆಗೆ ಸರ್ಕಾರ ಮುಂದಾದರೆ ನಾಲ್ವರು ಶಾಸಕರು ರಾಜಿನಾಮೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.