ಬಸವಣ್ಣನವರ ಆದರ್ಶ, ವಿಚಾರಧಾರೆ ಮೈಗೂಡಿಸಿಕೊಂಡರೆ ಸಮಾಜದಲ್ಲಿನ ಅಸಮಾನತೆ ನಿವಾರಣೆಯಾಗುತ್ತದೆ : ಕೆ.ಟಿ.ರಾಧಾಕೃಷ್ಣ.

64
firstsuddi

ಚಿಕ್ಕಮಗಳೂರು : ಭಕ್ತಿ ಭಂಡಾರಿ ಬಸವಣ್ಣನವರ ಆದರ್ಶ, ಸಂದೇಶ ಮತ್ತು ವಿಚಾರಧಾರೆಗಳನ್ನು ಎಲ್ಲರೂ ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿನ ಅಸಮಾನತೆ ನಿವಾರಣೆಯಾಗುತ್ತದೆ ಎಂದು ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು.

ನಗರದ ಬಿಎಸ್‍ಪಿ ಕಛೇರಿಯಲ್ಲಿ ಇಂದು ನಡೆದ ಭಕ್ತಿ ಭಂಡಾರಿ ಬಸವಣ್ಣನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಕ್ತಿ ಭಂಡಾರಿ ಬಸವಣ್ಣನವರು ಸಮಾನತೆಯ ಹರಿಕಾರರು, ಸಮಾಜದಲ್ಲಿ ಬೇರೂರಿದ್ದ ಜಾತೀಯತೆ, ಅಸೃಷ್ಯತೆ, ಅಸಮಾನತೆಯನ್ನು ತೊಡೆದು ಹಾಕಲು ಕ್ರಾಂತಿ ಮಾಡಿದವರು ಎಂದ ರಾಧಾಕೃಷ್ಣ ಬಸವಣ್ಣನವರ ವಚನಗಳನ್ನು ಮನನ ಮಾಡುವುದರಿಂದ ಅವರ ಹಾದಿಯಲ್ಲೇ ಸಾಗುವುದರಿಂದ ಭಾವೈಕ್ಯತೆ ಬೆಳೆಯುತ್ತದೆ ಎಂದರು.

ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಮಾತನಾಡಿ ಬಸವಣ್ಣನವರ ಕ್ರಾಂತಿಯಿಂದಾಗಿ ದಲಿತರು, ಶೋಷಿತರು ಮತ್ತು ಮಹಿಳೆಯರಿಂದು ಎಲ್ಲರಿಗೂ ಸಮನಾಗಿ ಗೌರವದಿಂದ ಬದುಕಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್‍ಪಿ ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ ಭಕ್ತಿ ಭಂಡಾರಿ ಬಸವಣ್ಣನವರು ಯಾವುದೋ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ, ಅವರು ಎಲ್ಲಾ ಜನಾಂಗಕ್ಕೂ ಮಾರ್ಗದರ್ಶಕರು ಎಂದು ಹೇಳಿದರು.

ಕ್ತಿ ಭಂಡಾರಿ ಬಸವಣ್ಣನವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪ ನಮನ ಸಲ್ಲಿಸಲಾಯಿತು. ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ಹುಣಸೇಮಕ್ಕಿ ಲಕ್ಷ್ಮಣ್, ನಗರಾಧ್ಯಕ್ಷ ನವೀನ್, ಕೆ.ಎಸ್.ಮಂಜುಳಾ, ಪ್ರಧಾನ ಕಾರ್ಯದರ್ಶಿ ವಸಂತ್, ಧನಂಜಯ, ರವಿಕುಮಾರ್, ಜಯಚಂದ್ರ, ಗಿರೀಶ್ ಉಪಸ್ಥಿತರಿದ್ದರು.