ಬಸ್ ಡಿಪೋ ಆವರಣದಲ್ಲೇ ಸಾರಿಗೆ ನೌಕರ ನೇಣಿಗೆ ಶರಣು!

57
firstsuddi

ಹಾವೇರಿ: ಡಿಪೋ ಆವರಣದಲ್ಲೇ ಸಾರಿಗೆ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು ನಗರ ಹೊರವಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಪೋದಲ್ಲಿ ನಡೆದಿದೆ.

ಮಲ್ಲನಗೌಡ ಬಡಗೇರ (48) ಮೃತ ಸಾರಿಗೆ ನೌಕರ. ರಾಣೆಬೇನ್ನೂರು ಬಸ್ ಡಿಪೋದಲ್ಲಿ ನಿರ್ವಾಹಕ ಹಾಗೂ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮೂಲತಃ ಇವರು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ದಾವಳಗಿ ಗ್ರಾಮದವರು ಎನ್ನಲಾಗಿದೆ.

ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹಲಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.