ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ-10ಕ್ಕೂ ಹೆಚ್ಚು ಮಂದಿ ಸಜೀವ ದಹನ…

247
firstsuddi

ಉತ್ತರ ಪ್ರದೇಶ : ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಕನೌಜ್‍ನಲ್ಲಿ ನಡೆದಿದೆ. ಸುಮಾರು 50ಮಂದಿ ಪ್ರಯಾಣಿಸುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ಬೆಂಕಿಯಿಂದ ಹೊತ್ತಿ ಹುರಿದಿದ್ದು, ಪರಿಣಾಮ 10ಕ್ಕೂ ಹೆಚ್ಚು ಮಂದಿ ಸಜೀವ ದಹವಾಗಿದ್ದು, 20ಕ್ಕೂ ಹೆಚ್ಚು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕನೌಜ್ ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಅವರು ತಿಳಿಸಿದ್ದು, ಈವರೆಗೂ 25 ಮಂದಿ ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಘೋಷಣೆ ಮಾಡಿದ್ದಾರೆ. ಮೃತಪಟ್ಟವರ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.