ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ-7 ಮಂದಿ ಸ್ಥಳದಲ್ಲೇ ಸಾವು…

158
firstsuddi

ಛತ್ತೀಸ್‍ಗಢ : ಕಾರ್ಮಿಕರಿದ್ದ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಛತ್ತೀಸ್‍ಗಢದ ರಾಯ್‍ಪುರದ ಚೆರಿಖೇಡಿ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಒಡಿಶಾದ ಗಂಜಾಂನಿಂದ ಗುಜರಾತ್‍ನ ಸೂರತ್‍ಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ 7 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೂ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.