ಹುಬ್ಬಳ್ಳಿ: ಮಹಿಳಾ ಕಂಡಕ್ಟರ್‌ರೊಬ್ಬರು ವೃದ್ಧೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕುಂದಗೋಳದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಬಸ್ ನಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕಿ ಹಾಗೂ ವೃದ್ದೆಯ ನಡುವೆ ಗಲಾಟೆ ನಡೆದಿದ್ದು, ಇಬ್ಬರು ಅವಾಚ್ಯ ಶಬ್ದಗಳಿಂದ ಬೈಯ್ದಾಡಿಕೊಂಡಿದ್ದಾರೆ. ಕೋಪಗೊಂಡ ನಿರ್ವಾಹಕಿ ಬಸ್‍ನಲ್ಲೇ ವೃದ್ದೆಗೆ ಕಪಾಳಮೋಕ್ಷ ಮಾಡಿದ್ದಾರೆ.
ಬೆಳಗ್ಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗ ಮಧ್ಯೆ ಶೆರೆವಾಡ ಗ್ರಾಮದ ಬಳಿ ನಿರ್ವಾಹಕಿ ಹಾಗೂ ವೃದ್ದ ಮಹಿಳೆ ನಡುವೆ ಟಿಕೆಟ್ ಹಾಗೂ ಸೀಟು ಸಲುವಾಗಿ ಜಗಳ ಆರಂಭವಾಗಿದೆ. ಈ ಜಗಳ ಅತಿರೇಕಕ್ಕೆ ಹೋಗಿದ್ದು, ವೃದ್ದೆ ನಿರ್ವಾಹಕಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ನಿರ್ವಾಹಕಿ ವೃದ್ದೆಗೆ ಕಪಾಳಮೋಕ್ಷ ಮಾಡಿದ್ದಾರೆ. ಸಹ ಪ್ರಯಾಣಿಕರು ಮೊಬೈಲ್‍ನಲ್ಲಿ ವೀಡಿಯೊ ಸೆರೆ ಹಿಡಿದಿದ್ದಾರೆ.
ಘಟನೆಯ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.










