ಬಹುಕೋಟಿ ಮೇವು ಹಗರಣ ಪ್ರಕರಣ ; ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ…

88
firstsuddi

ನವದೆಹಲಿ : ಬಹುಕೋಟಿ ಮೇವು ಹಗರಣ ಸಂಬಂಧ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ  ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ 60 ಲಕ್ಷ ರೂ. ದಂಡವನ್ನೂ ಪಾವತಿಸಬೇಕು ಎಂದು ತೀರ್ಪು ನೀಡಿದೆ.

ಜಾರ್ಖಂಡ್ ನ ಐದು ಮೇವು ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿಯನ್ನು ಖಜಾನೆಗಳಿಂದ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡ ಆರೋಪ ಸಾಬೀತಾಗಿದ್ದು, ಫೆಬ್ರವರಿ 15 ರಂದು ಸಿಬಿಐ ಕೋರ್ಟ್ ಐದನೇ ಮೇವು ಪ್ರಕರಣದಲ್ಲಿ (ಡೊರಾಂಡಾ ಖಜಾನೆ) ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿತ್ತು. ಇದೀಗ ಲಾಲು ಪ್ರಸಾದ್ ಯಾದವ್ ಅವರಿಗೆ ಶಿಕ್ಷೆ ನೀಡಲಾಗಿದೆ.

ಜಾರ್ಖಂಡ್ ನ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಗೆ ಸಂಬಂಧಿಸಿದ ಇತರ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಈ ಹಿಂದೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.