ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದಾಳಿ.

39

ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ, ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳಲ್ಲಿ ದುಷ್ಕರ್ಮಿಗಳು ಬಾಂಗ್ಲಾದೇಶದ ಮೈಮೆನ್‍ಸಿಂಗ್ ಮತ್ತು ದಿನಾಜ್‍ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳಲ್ಲಿ ಎಂಟು ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶೇಖ್ ಹಸೀನಾ ದೇಶ ಬಿಟ್ಟು ಹೋದ ನಂತರ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮುಂದುವರೆದಿವೆ. ಬಾಂಗ್ಲಾದೇಶದಲ್ಲಿ ದಂಗೆ ನಡೆದಾಗಿನಿಂದ ಅಲ್ಲಿ ಪರಿಸ್ಥಿತಿ ಶಾಂತಿಯುತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ಹೆೆಚ್ಚಾಗಿದೆ. ಗುರುವಾರ ಮೈಮೆನ್‍ಸಿಂಗ್‍ನ ಹಲುಘಾಟ್ ಹಾಗೂ ಶುಕ್ರವಾರದಂದು ಶಕುವಾಯ್‍ನ ಯೂನಿಯನ್‍ನಲ್ಲಿರುವ ಬೋಂಡರ್ ಪಾರಾ ದೇವಾಲಯದಲ್ಲಿ ಎರಡು ವಿಗ್ರಹಗಳಿಗೆ ಹಾನಿಯಾಗಿದೆ. ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಮೈಮೆನ್‍ಸಿಂಗ್‍ನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಲಸಕಂಡ ಗ್ರಾಮದ ಅಲಾಲ್ ಉದ್ದೀನ್ ಎಂಬಾತನನ್ನು ಪೋಲಸಕಂಡ ಕಾಳಿ ದೇವಸ್ಥಾನದಲ್ಲಿ ವಿಗ್ರಹವನ್ನು ಒಡೆದ ಆರೋಪದ ಮೇಲೆ ಗುರುವಾರ ಬಂಧಿಸಲಾಗಿದೆ.