ಬಾಂಬ್ ಬೆದರಿಕೆ; ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ…

64
firstsuddi

ತಿರುವನಂತಪುರ (ಕೇರಳ): ಬಾಂಬ್ ಬೆದರಿಕೆಯ ಹಿನ್ನೆಲೆ ಮುಂಬೈನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ನಗರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.10ಕ್ಕೆ ಇಳಿಯಬೇಕಿದ್ದ ವಿಮಾನ ಬಾಂಬ್ ಬೆದರಿಕೆಯಿಂದಾಗಿ 7.50ರ ಸುಮಾರಿಗೆ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗಿದೆ. ನಂತರ ವಿವರವಾದ ತಪಾಸಣೆ ನಡೆಸಲಾಯಿತು.

ಬಾಂಬ್ ಬೆದರಿಕೆಯ ಬಗ್ಗೆ ವಿಮಾನದ ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.