ಬಾದಾಮಿಯಿಂದ ಸ್ಪರ್ಧೆ ಮಾಡ್ತಾರಾ – ಕುತೂಹಲ ಮೂಡಿಸಿದ ಸಿದ್ದರಾಮಯ್ಯ ನಡೆ…

48
firstsuddi

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಯ ವಿಚಾರ ದೊಡ್ಡಮಟ್ಟದಲ್ಲಿ
ಸುದ್ದಿಯಾಗುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಕೋಲಾರ ಹಾಗೂ ವರುಣಾ ಕ್ಷೇತ್ರಗಳ ಪೈಕಿ ಎಲ್ಲಿ ಸ್ಪರ್ಧೆಗೆ ನಿಲ್ಲುತ್ತಾರೆ ಎಂಬ ಪ್ರಶ್ನೆ ಎದ್ದಿದೆ. ಈ ಬೆನ್ನಲ್ಲೆ ಸಿದ್ದರಾಮಯ್ಯ ಈಗ ಬಾದಾಮಿ ಪ್ರವಾಸಕ್ಕೆ ಮುಂದಾಗುತ್ತಿದ್ದಾರೆ.

ನಾಳೆ ಬಾದಾಮಿಗೆ ತೆರಳಲಿರುವ ಸಿದ್ದರಾಮಯ್ಯ 500 ಕೋಟಿ ರೂ. ವೆಚ್ಚದ ಬಾದಾಮಿ-ಕೆರೂರು ಶಾಶ್ವತ ಕುಡಿಯವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ರೋಡ್ ಶೋ ನಡೆಸಲಿದ್ದಾರೆ. ಬಾದಾಮಿ ನಗರದ ರಾಮದುರ್ಗ  ಕ್ರಾಸ್‌ನಿಂದ ಎಪಿಎಂಸಿ ಆವರಣದ ವರೆಗೆ ರೋಡ್ ಶೋ ನಡೆಸಲಿದ್ದು, ಈಗಾಗಲೇ ಭರ್ಜರಿ ರೋಡ್ ಶೋಗೆ ಸಿದ್ಧತೆಗಳನ್ನು ಮಾಡಲಾಗಿದೆ. ರೋಡ್ ಶೋ ವೇಳೆ ಸುಮಾರು 30 ಸಾವಿರ ಜನ ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.

ಈ ಬಾರಿ ನಾನು ಬಾದಾಮಿಯಿಂದ ಸ್ಪರ್ಧೆ ಮಾಡುವುದಿಲ್ಲ. ವರುಣಾ ಇಲ್ಲವೇ ಕೋಲಾರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದ ಸಿದ್ದರಾಮಯ್ಯ ಇದೀಗ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.