ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂ.

42
firstsuddi

ನವದೆಹಲಿ : 1992ರ ಬಾಬರಿ ಮಸೀದಿಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನೂ ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.

ಸುಪ್ರೀಂ ಕೋರ್ಟ್ ನಲ್ಲಿ ಈ ಹಿಂದೆ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ವಿಚಾರಣೆ ಹಂತದಲ್ಲಿ ಇದ್ದವು. ಆದರೆ, ನವೆಂಬರ್ 9, 2019ರಂದು ಅಯೋಧ್ಯಾ ರಾಮ ಜನ್ಮಭೂಮಿ ವಿವಾದ ಮುಕ್ತಾಯಗೊಂಡ ಬಳಿಕ ಅರ್ಜಿಗಳೂ ತಮ್ಮ ನೆಲೆ ಕಳೆದುಕೊಂಡಿವೆ.

ಬಾಬರಿ ಮಸೀದಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಅದನ್ನು ನೆಲಸಮಗೊಳಿಸಬೇಡಿ ಎಂದು 1991ರಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶ ಬಳಿಕ 1992 ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಹಿನ್ನೆಲೆ ಮುಹಮ್ಮದ್ ಅಸ್ಲಾಮ್ ಭುರೆ ಎಂಬುವರು ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಇವರು 2010ರಲ್ಲಿ ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ಅರ್ಜಿ ಹೆಚ್ಚು ವಿಚಾರಣೆಗೆ ಬಂದಿರಲಿಲ್ಲ.

2 ನವೆಂಬರ್ 9, 2019ರಂದು ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಅಯೋಧ್ಯಾ ರಾಮ ಜನ್ಮ ಭೂಮಿ ವಿವಾದವನ್ನು ಇತ್ಯರ್ಥಗೊಳಿಸಿತ್ತು. ಇದೀಗ ಈ ಕೇಸುಗಳ ಪ್ರಸ್ತುತತೆ ಇಲ್ಲದ ಕಾರಣ ಎಲ್ಲ ಕೇಸುಗಳನ್ನು ಕೈಬಿಡುತ್ತಿದ್ದೇವೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.