ಬಾರ್​ನಲ್ಲಿ ಕುಡಿದು ಕಿರಿಕ್ ಮಾಡಿಕೊಂಡ ಕಿರುತೆರೆ ನಟನ ವಿರುದ್ಧ ಎಫ್ಐಆರ್ ದಾಖಲು…

82
firstsuddi

ಬೆಂಗಳೂರು: ಕಿರುತೆರೆ ನಟನೊಬ್ಬ ಬಾರ್​ನಲ್ಲಿ ಕುಡಿದು ಕಿರಿಕ್ ಮಾಡಿಕೊಂಡಿದ್ದಾರೆ. ಇವರ ವಿರುದ್ಧ ನಗರದ ಆರ್​ಆರ್​ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪ್ರಜ್ವಲ್ ಎಂಬ ನಟನ ವಿರುದ್ಧ ಎಫ್ಐಆರ್ ದಾಖಲಾಗಿದೆ. ‘ಅಮೃತವರ್ಷಿಣಿ’ ಹಾಗೂ ‘ಅಣ್ಣ ತಂಗಿ’ ಧಾರಾವಾಹಿ ಮೂಲಕ ಪ್ರಜ್ವಲ್ ಖ್ಯಾತಿ ಪಡೆದಿದ್ದಾರೆ. ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೇತನ್ ಎಂಬುವರ ಜೊತೆ ಪ್ರಜ್ವಲ್ ಬಾರ್​​ನಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ.

ಆರ್​ಆರ್​ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್​ಗೆ ಹೋಗಿದ್ದರು. ಇದೇ ಬಾರ್​ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್​ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ.

ಮರದ ಪೀಸ್​​​ನಿಂದ ಚೇತನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪವನ್ನು ಚೇತನ್ ಮಾಡಿದ್ದಾರೆ. ಬಾರ್​ನಲ್ಲಿ ಅಷ್ಟೇ ಅಲ್ಲದೆ ರಸ್ತೆಯಲ್ಲಿ ಈ ಗುಂಪು ಮತ್ತೆ ಗಲಾಟೆ ಮಾಡಿಕೊಂಡಿದೆ. ಅಮೃತ ಬಾರ್​ನಲ್ಲಿ ಗಲಾಟೆ ಆದ ಬಳಿಕ ಚೇತನ್ ಸ್ನೇಹಿತರ ಮೇಲೆ, ಪ್ರಜ್ವಲ್ ಮತ್ತೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ದೂರು ದಾಖಲಾಗಿದೆ.

ಚೇತನ್ ನೀಡಿದ ದೂರಿನನ್ವಯ ಎಫ್ಐಆರ್ ದಾಖಲು ಮಾಡಿಕೊಂಡು ಪೊಲೀಸರು ನೋಟಿಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.