ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗೆ 43 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ…

113
firstsuddi

ಮೈಸೂರು : ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 43 ವರ್ಷಗಳ ಕಠಿಣ ಶಿಕ್ಷೆ, 50 ಸಾವಿರ ದಂಡ ವಿಧಿಸಿ ನಗರದ ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.

ಬಿಹಾರ ಮೂಲದ ಆರೋಪಿ ಶಿಕ್ಷೆಗೊಳಗಾದವನು. ವಿಶೇಷ ಕೋರ್ಟ್ ನ ನ್ಯಾಯಾಧೀಶೆ ಶೈಮಾ ಕಮರೋಜ್ ತೀರ್ಪು ನೀಡಿದ್ದು, ಸಂತ್ರಸ್ತ ಬಾಲಕಿಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ಸಲಹೆ ನೀಡಿದ್ದಾರೆ. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.

2021ರಲ್ಲಿ 10 ವರ್ಷದ ಬಾಲಕಿ ಮೇಲೆ ಆರೋಪಿಯು ನಿರಂತರ ಅತ್ಯಾಚಾರ ಎಸಗಿದ್ದ. ಮೈಸೂರು ಗ್ರಾಮಾಂತರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ ಪೆಕ್ಟರ್ ಕೆ.ಜೀವನ್ ತನಿಖಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.