ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ…

105
firstsuddi

ಬಾಲಿವುಡ್ ನಟ ಇಮ್ರಾನ್ ಹಶ್ಮಿ ‘ಗ್ರೌಂಡ್ ಜೀರೊ’ ಸಿನಿಮಾದ ಶೂಟಿಂಗ್ ಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಲ್ಲಿ ನಟನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಮೂಲಗಳ ಪ್ರಕಾರ, ಶೂಟಿಂಗ್ ಮುಗಿಸಿಕೊಂಡು ಕಾಶ್ಮೀರದ ಪಹಲ್ಗಾಮ್ ಮಾರುಕಟ್ಟೆಗೆ ಇಮ್ರಾನ್ ಬಂದಿದ್ದರು. ಈ ವೇಳೆ ಅವರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೆಕ್ಷನ್ 147, 148, 370, 336, 323 ಅಡಿಯಲ್ಲಿ ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಯಾರು ಇದನ್ನು ಮಾಡಿದ್ದು, ಯಾಕೆ ಕಲ್ಲು ತೂರಾಟ ಮಾಡಿದರು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.