ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಲಾರೆನ್ಸ್ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಕೊಲೆ ಬೆದರಿಕೆ.

35

ಮುಂಬೈ: ಇತ್ತಿಚೆಗೆ ಸಲ್ಮಾನ್ ಖಾನ್ ಗೆ ಒಂದಲ್ಲ ಒಂದು ರೀತಿಯಲ್ಲಿ ಅನೇಕ ಕೊಲೆ ಬೆದರಿಕೆಗಳು ಬರುತ್ತಲೆ ಇವೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇದೀಗ ಲಾರೆನ್ಸ್ ಬಿಷ್ಣೋಯ್ ಸಹೋದರ ಕೂಡ ಹೊಸ ಬೆದರಿಕೆ ಹಾಕಿದ್ದಾನೆ. ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು. ಈ ರೀತಿ ಮಾಡದಿದ್ದರೆ ನಾವು ಅವರನ್ನು ಕೊಲೆ ಮಾಡುತ್ತೇವೆ, ನಮ್ಮ ಗ್ಯಾಂಗ್ ಇನ್ನೂ ಸಕ್ರಿಯವಾಗಿದೆ ಎಂದು ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ ಅಧಿಕಾರಿಗಳು ಹೇಳಿದ್ದಾರೆ. ಬೆದರಿಕೆ ಹಾಕಿರುವ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.