ಮುಂಬೈ : ಬಾಲಿವುಡ್ ನಟ ಸೋನು ಸೂದ್ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ.
ನಿನ್ನೆ ಬೆಳಗ್ಗೆ 6 ಗಂಟೆಗೆ ದಾಳಿ ನಡೆಸಿದ್ದ ಅಧಿಕಾರಿಗಳು ಬರೋಬ್ಬರಿ 20 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದು, ಇಂದು ಕೂಡ ದಾಳಿ ಮುಂದುವರೆಸಿದ್ದಾರೆ. ಮುಂಬೈ ಕಚೇರಿ ಮತ್ತು ಲಕ್ನೋದಲ್ಲಿರುವ ಕಂಪನಿ ಸೇರಿದಂತೆ ಒಟ್ಟು ಆರು ಕಡೆ ಈ ದಾಳಿ ನಡೆದಿದೆ. ತೆರಿಗೆ ವಂಚನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ 2012 ರಲ್ಲಿ ತೆರಿಗೆ ವಂಚನೆ ಆರೋಪದ ಮೇಲೆ ದಾಳಿ ನಡೆದಿತ್ತು.
ಕೋವಿಡ್-19 ಸಮಯದಲ್ಲಿ ಸಾವಿರಾರು ನಿರ್ಗತಿಕರಿಗೆ ಸಹಾಯ ಮಾಡಿ ನಿಜ ಜೀವನದಲ್ಲೂ ಹೀರೊ ಆಗಿ ನಟ ಸೋನು ಸೂದ್ ಹೊರಹೊಮ್ಮಿದ್ದರು. ದೆಹಲಿ ಸರ್ಕಾರ ಕೆಲ ದಿನಗಳ ಹಿಂದೆ ಶಾಲಾ ವಿದ್ಯಾರ್ಥಿಗಳಿಗೆ ಆರಂಭಿಸಿರುವ ಮಾರ್ಗದರ್ಶನ ಕಾರ್ಯಕ್ರಮದ ರಾಯಭಾರಿಯಾಗಿ ಸೋನು ಸೂದ್ ಅವರನ್ನು ಆಯ್ಕೆ ಮಾಡಿತ್ತು. ಇದೀಗ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಸೂದ್ ಅವರ ಸಾವಿರಾರು ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ.










