ಬಾಲಿವುಡ್ ನಟಿ ಸುಶ್ಮಿತಾ ಸೇನ್​ಗೆ ಹೃದಯಾಘಾತ…

87
firstsuddi

ಬಾಲಿವುಡ್ ನಟಿ, ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ ಆಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಎರಡ್ಮೂರು ದಿನಗಳ ಹಿಂದೆಯೇ ಅವರಿಗೆ ಹೃದಯಾಘಾತ ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ವಿಷಯವನ್ನು ಸ್ವತಃ ಸುಶ್ಮಿತಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಒಂದೆರಡು ದಿನಗಳ ಹಿಂದೆಯಷ್ಟೇ ನನಗೆ ಹೃದಯಾಘಾತ ಸಂಭವಿಸಿತು. ನನಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಸ್ಟೆಂಟ್ ಅಳವಡಿಸಲಾಗಿದೆ. ನನ್ನ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಮತ್ತೆ ಜೀವನ ಸಾಗಿಸಲು ನಾನು ಸಿದ್ಧಳಾಗಿದ್ದೇನೆ. ನನ್ನ ಪ್ರೀತಿ ಪಾತ್ರರಿಗೆ ಈ ಗುಡ್ ನ್ಯೂಸ್ ತಿಳಿಸುವ ಸಲುವಾಗಿ ಈ ಪೋಸ್ಟ್ ಹಂಚಿಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರನ್ನು ನಾನು ಪ್ರೀತಿಸುತ್ತೇನೆ ಎಂದು ಇನ್ಸ್ಟಾಗ್ರಾಮ್ ನಲ್ಲಿ ನಟಿ ಸುಶ್ಮಿತಾ ಸೇನ್ ಬರೆದುಕೊಂಡಿದ್ದಾರೆ.