ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರ ಸಾವು…

215
firstsuddi

ಬೆಂಗಳೂರು : ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯ ಟ್ಯಾನರಿ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಟೀ ಪಾಯಿಂಟ್ನಲ್ಲಿ ನಡೆದಿದೆ. ಚೋಟು ಮತ್ತು ಗಫೂರ್ ಮೃತ ದುರ್ಧೈವಿಗಳು. ಟೀ ಅಂಗಡಿ ಒಳಗಿದ್ದ ಬಾವಿಯನ್ನು ಸ್ವಚ್ಚಗೊಳಿಸಲು ಹೋಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸ್ಮಿಲ್ಲಾ ಟೀ ಪಾಯಿಂಟ್ ನಡೆಸುತ್ತಿದ್ದ ನವೀದ್ ಅಹ್ದದ್‍ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕೆಜಿ ಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.