ಬಿ.ಎಸ್. ಯಡಿಯೂರಪ್ಪ ಅವರ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಿದ ಸುಪ್ರೀಂ…

268
firstsuddi

ನವದೆಹಲಿ : ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಲು ಕಾರಣವಾಗಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ಆಡೀಯೋ ಸುಪ್ರೀಂ ಕೋರ್ಟ್ ಕದತಟ್ಟಿದೆ, ಬಿ.ಎಸ್. ಯಡಿಯೂರಪ್ಪ ಅವರ ಆಡಿಯೋ ವೈರಲ್ ಆದ ಬಳಿಕ ಕಾಂಗ್ರೆಸ್ ಬಿ.ಎಸ್. ಯಡಿಯೂರಪ್ಪ ಅವರ ಆಡಿಯೋವನ್ನು ಪರಿಗಣಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ನಿನ್ನೆ ಮನವಿಯನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್ ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಇಂದು ವಿಚಾರಣೆ ನಡೆಸಿದ ನ್ಯಾ. ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಿದೆ. ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಬೇಕು ಎಂದು ವಾದ ಮಂಡಿಸಿದರು. ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದರೆ ತೀರ್ಪು ವಿಳಂಬವಾಗುತ್ತದೆ. ಹೀಗಾಗಿ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಲಾಗಿದೆ ಎಂದು ಹೇಳಿ ತೀರ್ಪನ್ನು ಕಾಯ್ದಿರಿಸಿದೆ.