ಬಿಎಸ್‍ವೈ ಸರ್ಕಾರ ಕೇಳಿದ್ದು ರೂ.38 ಸಾವಿರ ಕೋಟಿ ಎರಡು ಕಂತುಗಳಲ್ಲಿ ಕೇಂದ್ರ ನೀಡಿರುವುದು ರೂ.3,069 ಕೋಟಿ. ಉಳಿದದ್ದು ಯಾವಾಗ?- ಸಿದ್ದರಾಮಯ್ಯ ಪ್ರಶ್ನೆ…

146
firstsuddi

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರ ಹಣ ಬಿಡುಗಡೆ ಮಾಡಿರುವುದಕ್ಕೆ ಸಂಬಂದಿಸಿದಂತೆ ಇನ್ನು ಉಳಿದ ಪರಿಹಾರ ಬಿಡುಗಡೆ ಯಾವಾಗ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಪ್ರಶ್ನಿಸಿದ್ದಾರೆ. “ನೆರೆ ಪರಿಹಾರಕ್ಕಾಗಿ ರೂ.1869 ಕೋಟಿ ಪರಿಹಾರ ನೀಡಿರುವ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಧನ್ಯವಾದಗಳು. ಅಂದಾಜು ನೆರೆ ನಷ್ಟ ರೂ.1ಲಕ್ಷ ಕೋಟಿ. ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಕೇಳಿದ್ದು ರೂ.38 ಸಾವಿರ ಕೋಟಿ ಎರಡು ಕಂತುಗಳಲ್ಲಿ ಕೇಂದ್ರ ನೀಡಿರುವುದು ರೂ.3,069 ಕೋಟಿ. ಉಳಿದದ್ದು ಯಾವಾಗ? ಆಗಸ್ಟ್ ತಿಂಗಳ ನೆರೆಹಾವಳಿಯ ಸಮೀಕ್ಷಾ ವರದಿ ಆಧಾರದಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ರೂ.38 ಸಾವಿರ ಕೋಟಿ ಪರಿಹಾರ ಕೇಳಿದ್ದರು. ಅಕ್ಟೋಬರ್ ತಿಂಗಳ ಅತಿವೃಷ್ಟಿಯ ಸಮೀಕ್ಷೆ ಇನ್ನೂ ನಡೆದಿಲ್ಲ. ಅದನ್ನು ತಕ್ಷಣ ಪೂರ್ಣಗೊಳಿಸಿ ಆ ಸಮೀಕ್ಷಾ ವರದಿಯ ಜೊತೆ ಪರಿಹಾರಕ್ಕಾಗಿ ಪೂರಕ ಬೇಡಿಕೆ ಸಲ್ಲಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.