ಬಿಎಸ್‍ವೈಗೆ ಬಿಗ್ ರಿಲೀಫ್ – ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ…

55
firstsuddi

ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಪಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಸದ್ಯಕ್ಕೆ ಬಿಎಸ್‍ವೈ ವಿರುದ್ಧ ತನಿಖೆ ಮಾಡದಂತೆ ಸೂಚನೆ ನೀಡಿದೆ.

2000-2001ನಲ್ಲಿ ಐಟಿ ಕಾರಿಡಾರ್ ಯೋಜನೆಗೆ ವಶಪಡಿಸಿಕೊಂಡ ಭೂಮಿಯನ್ನು 2006 ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅಧಿಕಾರ ದುರ್ಬಳಕೆ ಮಾಡಿಕೊಂಡು ಆಪ್ತರ ಹೆಸರಿಗೆ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ವಾಸುದೇವ ರೆಡ್ಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ ಬಿ.ಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣ ಸಂಬಂಧ ಎಫ್ಐಆರ್ ರದ್ದುಪಡಿಸಲು ರಾಜ್ಯ ಹೈಕೋರ್ಟ್ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ವೈ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದು, ಹೈಕೋರ್ಟ್ ಗೆ ನೋಟಿಸ್ ಜಾರಿ ಮಾಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.