ಬಿಜೆಪಿ ಉಚ್ಛಾಟಿತ ನಾಯಕ ನವೀನ್ ಕುಮಾರ್ ಜಿಂದಾಲ್‌ಗೆ ಕೊಲೆ ಬೆದರಿಕೆ…

66
firstsuddi

ನವದೆಹಲಿ : ಉದಯಪುರದಲ್ಲಿ ಟೈಲರ್ ಶಿರಚ್ಛೇದ ಮಾಡಿದ ಬೆನ್ನಲ್ಲೆ ಬಿಜೆಪಿ ಉಚ್ಛಾಟಿತ ನಾಯಕ ನವೀನ್ ಕುಮಾರ್ ಜಿಂದಾಲ್ ಗೆ ಕೊಲೆ ಬೆದರಿಕೆ ಬರುತ್ತಿವೆ ಎಂದು ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಬೆಳಗ್ಗೆ 6.43ರ ಸುಮಾರಿಗೆ ನನಗೆ ಮೂರು ಇ-ಮೇಲ್ ಗಳು ಬಂದಿವೆ. ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದನದ ವೀಡಿಯೋವನ್ನು ಲಗತ್ತಿಸಲಾಗಿದೆ. ಇಮೇಲ್ ಗಳಲ್ಲಿ ತನಗೆ ಮತ್ತು ಕುಟುಂಬಕ್ಕೆ ಶಿರಚ್ಛೇದ ಮಾಡುವುದಾಗಿ ಬೆದರಿಕೆಗಳನ್ನು ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಉದಯಪುರದ ಮಾಲ್ದಾಸ್ ಪ್ರದೇಶದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ನಿನ್ನೆ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ.