ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ; ವಿಜಯಸಂಕಲ್ಪ ಯಾತ್ರೆ ರದ್ದುಗೊಳಿಸಿ ಯಡಿಯೂರಪ್ಪ ವಾಪಸ್…

73
firstsuddi

ಮೂಡಿಗೆರೆ : ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಜೆಪಿಯಿಂದ ಹೈಡ್ರಾಮಾ ನಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಸ್ತೆ ಮಧ್ಯೆಯೇ ಅಡ್ಡ ಹಾಕಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಬೇಡವೇ ಬೇಡ. ಹೊಸ ಮುಖಕ್ಕೆ ಟಿಕೆಟ್ ಕೊಡಿ ಅಂತಾ ನೂರಾರು ಕಾರ್ಯಕರ್ತರು ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಸ್‍ವೈ ಅವರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಬೆನ್ನಲ್ಲೇ ಸಿಟ್ಟಾದ ಮಾಜಿ ಸಿಎಂ ಬಿಎಸ್‍ವೈ ವಿಜಯಸಂಕಲ್ಪ ಯಾತ್ರೆ ರದ್ದುಗೊಳಿಸಿ, ಚಿಕ್ಕಮಗಳೂರಿಗೆ ವಾಪಸ್ ಆಗಿದ್ದಾರೆ.