ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ ತಾಯಿಗೂ ಕೊರೊನಾ ಪಾಸಿಟಿವ್…

131
firstsuddi

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕಳೆದೆರಡು ದಿನಗಳಿಂದ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಬಳಿಕ ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇತ್ತ ಜ್ಯೋತಿರಾಧಿತ್ಯ ಸಿಂಧಿಯಾ ಅವರ ತಾಯಿಗೂ ಸೋಂಕು ತಗುಲಿರುವುದು ದೃಢವಾಗಿದ್ದು, ಅವರಿಗೂ ಕೂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.