ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್…

85
firstsuddi

ಕಲಬುರಗಿ : ಚಿತ್ತಾಪುರದಲ್ಲಿ ಪೇಸಿಎಂ ಪೋಸ್ಟರ್ ವಾರ್ ತಾರಕಕ್ಕೇರಿದ್ದು, ಶಾಸಕ ಪ್ರಿಯಾಂಕ್ ಖರ್ಗೆರನ್ನ ಶೂಟ್ ಮಾಡಲು ಸಿದ್ಧ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ರನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಮಧ್ಯರಾತ್ರಿ ಮಣಿಕಂಠ ರಾಠೋಡ್ ರನ್ನ ಹೈದರಾಬಾದ್‌ ನಲ್ಲಿ ಪೊಲೀಸರು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದಾರೆ.

ಪ್ರಿಯಾಂಕ್ ಖರ್ಗೆ ನಮ್ಮ ಮೇಲೆ ಗುಂಡು ಹೊಡೆದ್ರೂ ನಾವು ಎದುರಿಸಲು ಸಿದ್ಧರಿದ್ದೇವೆ. ಅವರನ್ನ ಶೂಟ್ ಮಾಡಲೂ ಸಿದ್ಧ ಎಂದಿದ್ದರು. ಮಣಿಕಂಠ ರಾಠೋಡ್ ಹೇಳಿಕೆ ಹಿನ್ನಲೆಯಲ್ಲಿ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಅಲ್ಲದೇ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಹಾಗೂ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದ್ದರು. ಇಂದು ಕಲಬುರಗಿಗೆ ಆಗಮಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡೋದಾಗಿ ಎಚ್ಚರಿಕೆ ನೀಡಿದ್ದರು. ಇದೀಗ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ.