ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್…

76
firstsuddi

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಧೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನ 12,000 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 9,020 ಜನರಿಗೆ ವಕ್ಕರಿಸಿದೆ. ರಾಜ್ಯದಲ್ಲಿ ನಿನ್ನೆ ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ.