ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

92
Firstsuddi

ನವದೆಹಲಿ : ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಇಂದು ಶವವಾಗಿ ಪತ್ತೆಯಾಗಿದ್ದಾರೆ.

ಮಂಡಿಯ ಸಂಸದ ರಾಮ್ ಸ್ವರೂಪ್ ಶರ್ಮಾ ಅವರ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಶರ್ಮಾ ಅವರ ಸಾವಿನಿಂದಾಗಿ ಇಂದು ನಡೆಯಬೇಕಿದ್ದ ಬಿಜೆಪಿ ಸಂಸದೀಯ ಪಕ್ಷದ ಸಭೆ ರದ್ದುಗೊಂಡಿದೆ.

1958ರಲ್ಲಿ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಜನಿಸಿದ ಶರ್ಮಾ ಅವರು ಎರಡು ಬಾರಿ ಸಂಸದರಾಗಿದ್ದರು. 2014ರಲ್ಲಿ ಮೊದಲ ಬಾರಿ ಲೋಕಸಭೆಗೆ ಆಯ್ಕೆಯಾದರು. ಅವರು ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದ್ದರು.