ಬಿಜೆಪಿ ಸೇರ್ಪಡೆಯಾದ ಎ.ಕೆ.ಆಂಟನಿ ಪುತ್ರ ಅನಿಲ್ ಆಂಟನಿ.

71
firstsuddi

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರಿದ್ದಾರೆ.

ದೆಹಲಿಯಲ್ಲಿ ಇಂದು ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್, ಕೇಂದ್ರ ಸಚಿವ ವಿ. ಮುರಳೀಧರನ್, ಪಿಯೂಷ್ ಗೋಯಲ್ ಸಮ್ಮುಖದಲ್ಲಿ ಅನಿಲ್ ಆಂಟನಿ ಪಕ್ಷ ಸೇರ್ಪಡೆಗೊಂಡರು.

ಬಿಜೆಪಿ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನಿಲ್ ಆಂಟನಿ, ಇಂದು ಕಾಂಗ್ರೆಸ್ ಪಕ್ಷದವರು ಅವರ ಧರ್ಮ ಕೇವಲ ಒಂದು ಕುಟುಂಬಕ್ಕಾಗಿ ಕೆಲಸ ಮಾಡಬೇಕು ಎನ್ನುವುದು. ಆದರೆ ನನ್ನ ಧರ್ಮ ಏನೆಂದರೆ ದೇಶಕ್ಕಾಗಿ ಕೆಲಸ ಮಾಡಬೇಕು ಎನ್ನುವುದು. ನಮ್ಮ ಪ್ರಧಾನಿ ದೇಶವನ್ನು ಮುಂದಿನ 25 ವರ್ಷಗಳಲ್ಲಿ ಯಾವ ರೀತಿ ಕೊಂಡೊಯ್ಯಬೇಕು ಎನ್ನುವುದರ ಬಗ್ಗೆ ಸ್ಪಷ್ಟವಾದ ದೃಷ್ಟಿಕೋನವನ್ನು ಹೊಂದಿದ್ದಾರೆ. ಅವರಲ್ಲಿ ದೇಶದ ಜನರ ಅಭಿವೃದ್ಧಿಗಾಗಿ ಇರುವ ಸ್ಪಷ್ಟವಾದ ಗುರಿ ಇದೆ. ನರೇಂದ್ರ ಮೋದಿಯವರ ಕನಸುಗಳಿಗೆ ಹೆಗಲಾಗಿ ನಿಲ್ಲುವುದಕ್ಕೆ ಒಂದು ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.