ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಜವಾಬ್ದಾರಿಯನ್ನು ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸರ್ಕಾರ ಒಳ್ಳೆಯ ಕೆಲಸ ಮಾಡಿದರೂ ಅನಿರೀಕ್ಷಿತ ಫಲಿತಾಂಶ ಬಂದಿದೆ, ಬಿಜೆಪಿಗೆ ಹಿನ್ನಡೆಯಾಗಿದೆ. ಇಡೀ ಸೋಲಿನ ಜವಾಬ್ದಾರಿಯನ್ನು ರಾಜ್ಯಾಧ್ಯಕ್ಷನಾಗಿ ನಾನು ಹೊರುತ್ತೇನೆ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳನ್ನು ಸಲ್ಲಿಸ್ತೇನೆ. ಗೆದ್ದ ಬಿಜೆಪಿ ಅಭ್ಯರ್ಥಿಗಳಿಗೆ ಹಾಗೂ ಕಾಂಗ್ರೆಸ್‌ಗೂ ಅಭಿನಂದನೆ ಸಲ್ಲಿಸ್ತೇನೆ. ಜನತಾ ಆಶೀರ್ವಾದ ಸ್ವಾಗತಿಸ್ತೇನೆ. ರಾಜ್ಯ ಒಳ್ಳೆಯ ಕಾರ್ಯಗಳಿಗೆ ಸ್ವಾಗತ ಕೊಟ್ಟಿದ್ದೇವೆ ಎಂದರು.
ಮುಂದುವರೆದು ಮಾತನಾಡಿದ ಅವರು, ‘ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರು ಕೆಲಸ ಮಾಡಿದ್ದಾರೆ. ಇಂದು ಬಂದಿರೋ ಫಲಿತಾಂಶವನ್ನು ನಾನು ಸ್ವಾಗತಿಸ್ತೇನೆ. ಸೋತಿರೋ ಕಡೆ ಯಾಕೆ ಸೋತಿದ್ದೇವೆ ಅಂತ ಪರಾಮರ್ಶೆ ಮಾಡ್ತೀವಿ. ಮುಂದಿನ ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡ್ತೀವಿ’ ಎಂದರು.










