ಬಿಜೆಪಿಗೆ ಡಿಕೆಶಿಯವರನ್ನ ಟಾರ್ಗೆಟ್ ಮಾಡುವ ಅವಶ್ಯಕತೆ ಇಲ್ಲ : ಸಿ.ಟಿ.ರವಿ.

86
firstsuddi

ಚಿಕ್ಕಮಗಳೂರು : ಬಿಜೆಪಿಗೆ ಡಿಕೆಶಿಯವರನ್ನು ಟಾರ್ಗೆಟ್ ಮಾಡುವ ಅವಶ್ಯಕತೆ ಇಲ್ಲ. ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಹೇಳಿದರು.

ಡಿ.ಕೆ.ಶಿವಕುಮಾರ್, 2022 ಆಗಸ್ಟ್ ಬಳಿಕ ಬಿಜೆಪಿ ನನ್ನನ್ನು ಟಾರ್ಗೆಟ್ ಮಾಡುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮನ್ನ ತಾವು ವೈಭವೀಕರಿಸಿಕೊಳ್ಳಬಹುದು. ಆದ್ರೆ ಅವರ ವೈಯಕ್ತಿಕ ಸಾಮರ್ಥ್ಯದ ಬಗ್ಗೆ ನಾನು ಪ್ರಶ್ನೆ ಮಾಡಲ್ಲ. ಅವರ ರಾಜಕೀಯ ಸಾಮರ್ಥ್ಯ ಸಾಬೀತು ಮಾಡಿರೋದು ಕನಕಪುರದಲ್ಲಷ್ಟೆ ಎಂದು ವ್ಯಂಗ್ಯ ಮಾಡಿದರು.

ಉಪ್ಪು ತಿಂದವ ನೀರು ಕುಡೀತಾರೆ, ತಪ್ಪು ಮಾಡಿದವ ಶಿಕ್ಷೆ ಅನುಭವಿಸುತ್ತಾರೆ. ಅವರು ಏನೂ ತಪ್ಪು ಮಾಡಿಲ್ಲ ಅಂದ್ರೆ ಆತಂಕ ಪಡುವ ಅವಶ್ಯಕತೆ ಇಲ್ಲ. ರಾಜಕೀಯದಲ್ಲಿ ಇದ್ದೇನೆಂದು ಶೆಲ್ಟರ್ ತೆಗೆದುಕೊಳ್ಳಲು ಆಗಲ್ಲ. ತಪ್ಪು ಮಾಡದೆ ಜೈಲಿಗೆ ಹೋದರೆ ಅದೊಂದು ಶಕ್ತಿ ಆಗುತ್ತೆ. ತಪ್ಪು ಮಾಡಿದವರದ್ದು ರಾಜಕೀಯ ಅಂತ್ಯ ಆಗುತ್ತೆ ಎಂದು ಹೇಳಿದರು.

ಯುಪಿಯಲ್ಲಿ ಮೈ ಲಡಕಿ ಹೂಂ, ಲಡ್ ಸಕ್ತಾ ಹೈ ಹೇ ಅಂತ ಪ್ರಿಯಾಂಕ ಗಾಂಧಿ ನೇತೃತ್ವ ಚುನಾವಣೆ ವಹಿಸಿದ್ರು. ಏನಾಯ್ತು..? 387 ಕ್ಷೇತ್ರದಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಂಡಿತು. ಕಾಂಗ್ರೆಸ್ ಅವರೇ ಅಧಿಕಾರದಲ್ಲಿದ್ದ ಪಂಜಾಬ್ ನಲ್ಲಿ ಹೀನಾಯವಾಗಿ ಸೋತರು. ಆಮ್ ಆದ್ಮಿಗೆ ರೆಡ್ ಕಾರ್ಪೇಟ್ ಹಾಸಿ ಕರ್ಕೊಂಡ್ ಬಂದು ಅಧಿಕಾರದಲ್ಲಿ ಕೂರಿಸಿದರು. ದೇಶದ ಜನರೇ ಕಾಂಗ್ರೆಸ್ ತಿರಸ್ಕರಿಸಿರುವಾಗ ಡಿಕೆಶಿ ಟಾರ್ಗೆಟ್ ಮಾಡಿ ಏನಾಗಬೇಕು ಎಂದು ಪ್ರಶ್ನೆ ಮಾಡಿದರು.