ಬಿಜೆಪಿಗೆ ಸುದೀಪ್ ಬೆಂಬಲ ಸಿಕ್ತಿರೋದನ್ನು ಕಾಂಗ್ರೆಸ್‌ನವರಿಗೆ ಸಹಿಸೋಕೆ ಆಗುತ್ತಿಲ್ಲ : ಬಿಎಸ್‌ವೈ.

59
firstsuddi

ಬೆಂಗಳೂರು: ಚಲನಚಿತ್ರದಲ್ಲಿ ಫೇಮಸ್ ಆಗಿರುವಂತಹ ವ್ಯಕ್ತಿ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಎಂದು ಹೇಳಿರುವ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಆದರೆ ಈ ವಿಚಾರವನ್ನು ಸಹಿಸೋಕಾಗದೇ ಕಾಂಗ್ರೆಸ್‌ನವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ ನೇರವೇರಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್‌ನವರಿಗೆ ತಲೆ ಕೆಟ್ಟಿದೆ. ಇದಕ್ಕಾಗಿ ಏನೇನೋ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಪೋರ್ಟ್ ಸಿಕ್ತಿರೋದನ್ನು ಕಾಂಗ್ರೆಸ್‌ನವರಿಗೆ ಸಹಿಸೋಕೆ ಆಗುತ್ತಿಲ್ಲ ಎಂದು ಕಿಡಿಕಾರಿದರು.

ವಿ ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಬಿಎಸ್‌ವೈ, ಹೈಕಮಾಂಡ್ ಏನು ಹೇಳುತ್ತೋ ಅದರಂತೆಯೇ ನಡೆಯುತ್ತೆ. ಶುಕ್ರವಾರ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.