ನವದೆಹಲಿ : ಈಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಪಂಜಾಬ್ ಕಾಂಗ್ರೆಸ್ ನ ಮಾಜಿ ಮುಖ್ಯಸ್ಥ ಸುನಿಲ್ ಜಾಖರ್ ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಜಾಖರ್ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಜೆಪಿ ನಡ್ಡಾ ಅವರು, ತಮ್ಮ ರಾಜಕೀಯ ಜೀವನದಲ್ಲಿ ಸ್ವತಃ ಹೆಸರು ಮಾಡಿದ ಅನುಭವಿ ರಾಜಕೀಯ ನಾಯಕರಾಗಿದ್ದಾರೆ. ಪಂಜಾಬ್ ನಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದರು.
ನಾನು ಯಾವುದೇ ವೈಯಕ್ತಿಕ ಲಾಭ, ಹಿತಾಸಕ್ತಿಗಾಗಿ ರಾಜಕೀಯ ಮಾಡದ ಕಾರಣ ಬಿಜೆಪಿ ನನ್ನನ್ನು ಸ್ವಾಗತಿಸಿದೆ ಎಂದು ಸುನಿಲ್ ಜಾಖರ್ ಹೇಳಿದ್ದಾರೆ.










