ಮೈಸೂರು: ಬಿಜೆಪಿಯಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರಧಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸಿದಕ್ಕೆ ಎಂಬುದಕ್ಕೆ ಪ್ರತಿಕ್ರಿಯಿಸಿ, “ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ..? ಎಂದು ಪ್ರಶ್ನಿಸಿದರು.
ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ, ಕುಮಾರಸ್ವಾಮಿ ಇಂದು ಮಾಧ್ಯಮಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆಯಿಲ್ಲ” ಎಂದರು. ಬಳಿಕ ಪೊನ್ನಣ್ಣ ಅವರು ನನ್ನ ಕಾನೂನು ಸಲಹೆಗಾರ ಆಗಿರುವುದರಿಂದ, ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.










