ಬಿಜೆಪಿಯಿಂದ ಕಾಂಗ್ರೆಸ್‍ಗೆ ಲೀಗಲ್ ನೋಟಿಸ್- ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ…

134
firstsuddi

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್‍ಗೆ ಲೀಗಲ್ ನೋಟೀಸ್ ನೀಡಲಾಗಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಉಪಕರಣಗಳ ಖರೀದಿಯಲ್ಲಿನ ಅಕ್ರಮಗಳನ್ನು ಬಯಲಿಗೆ ಎಳೆದಿದ್ದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನ ಪರಿಷತ್ ಸದಸ್ಯರೊಬ್ಬರಿಂದ ವಕೀಲರ ಮೂಲಕ ನನಗೆ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ನೋಡೀಸ್ ಕೊಡಿಸಿದ್ದಾರೆ, ಸಂತೋಷ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವರು ಇಲ್ಲದೆ ಮುಖ್ಯಕಾರ್ಯದರ್ಶಿಯವರಿಂದ ಲೀಗಲ್ ನೋಟೀಸ್ ಬರಬಹುದೆಂಬ ನಿರೀಕ್ಷೆ ಇತ್ತು. ಒಬ್ಬ ಎಂಎಲ್‍ಸಿಯಿಂದ ಕೊಡಿಸಿದ್ದಾರೆ. ಈ ರೀತಿ ನಮ್ಮನ್ನು ಹೆದರಿಸಬಹುದೆಂದು ಅವರು ನಿರೀಕ್ಷಿಸಿದ್ದರೆ ಅದು ಸರ್ಕಾರದ ಮೂರ್ಖತನ. ನಮ್ಮ ಹೋರಾಟವನ್ನು ನಾವು ಜನರ ಬಳಿ ಕೊಂಡೊಯ್ಯುತ್ತಿದ್ದೇವೆ ಎಂದು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.