ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಯಾವುದೇ ಅನ್ಯಾಯವಾಗಲ್ಲ: ಡಿ.ಕೆ.ಶಿವಕುಮಾರ್.

31

ಉಡುಪಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷನಾಗಿ ಹೇಳುತ್ತಿದ್ದೇನೆ ನಮ್ಮ ಸರಕಾರ ಮತ್ತು ಪಕ್ಷವು ಜನರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ ಎಂದು ಹೇಳಿದರು. ಈಗಾಗಲೇ ರದ್ದಾದ ಬಿಪಿಎಲ್ ಕಾರ್ಡ್‍ಗಳ ಪಟ್ಟಿಯನ್ನು ಸಲ್ಲಿಸುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ. ಆ ಪಟ್ಟಿಯಲ್ಲಿ ಅರ್ಹ ಕುಟುಂಬಗಳಿವೆಯೇ ಎಂದು ಪರಿಶೀಲಿಸುವಂತೆಯೂ ತಿಳಿಸಿದ್ದೇವೆ. ಇದಲ್ಲದೆ, ಪ್ರತಿ ತಾಲೂಕಿನಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಸಮಿತಿಗಳನ್ನು ರಚಿಸಲಾಗಿದೆ. ಕಾಂಗ್ರೆಸ್ ಮತ್ತು ಸರ್ಕಾರ ಈ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸುತ್ತದೆ ಎಂದು ತಿಳಿಸಿದರು.