ಬಿಬಿಎಂಪಿ ಮಾಜಿ ಕಾರ್ಪೊರೇಟರ್ ದೊಡ್ಡಯ್ಯ ಪುತ್ರ ಆತ್ಮಹತ್ಯೆ…

63
firstsuddi

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ದೊಡ್ಡಯ್ಯ ಅವರ ಪುತ್ರ ಗೌತಮ್(29) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

ಕಾಂಗ್ರೆಸ್ ಪಕ್ಷದಿಂದ ದೊಡ್ಡಯ್ಯ ಬೆಂಗಳೂರು ಮಹಾನಗರ ಪಾಲಿಕೆಗೆ ಕಾರ್ಪೊರೇಟರ್ ಆಗಿದ್ದರು. ಬಿಬಿಎಂಪಿ ಮಾಜಿ ಸದಸ್ಯ ಪುತ್ರ ಗೌತಮ್ ಆತ್ಮಹತ್ಯೆ ವಿಚಾರವಾಗಿ ಕೆಲ ಊಹಾಪೋಹಗಳು ಕೇಳಿಬಂದಿದ್ದು, ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಗೌತಮ್ ತಂದೆ ದೊಡ್ಡಯ್ಯ, ನನ್ನ ಮಗ ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದ ಎನ್ನುವುದು ಶುದ್ಧ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.

ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ನಮಗೂ ಗೊತ್ತಾಗುತ್ತಿಲ್ಲ. ಕೊನೆ ಮಗನೆಂದು ಗೌತಮ್​ನನ್ನು ತುಂಬಾ ಮುದ್ದಾಗಿ ಸಾಕಿದ್ದೆವು. ಹುಡುಗರ ಜೊತೆ ಓಡಾಡಿಕೊಂಡಿದ್ದ. ಆತನಿಗೆ ಮದುವೆ ಮಾಡಲು ಹೆಣ್ಣು ನೋಡುತ್ತಿದ್ದೆವು. ಕಳೆದ 3-4 ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ಮಾಡುತ್ತಿದ್ದು, ಸಾವಿಗೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.