ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಕಾಂಗ್ರೆಸ್​ಗೆ ರಾಜೀನಾಮೆ…

51
firstsuddi

ತಿರುವನಂತಪುರಂ : 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರದ ವಿರುದ್ಧ ಮಾತನಾಡಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದ, ಕಾಂಗ್ರೆಸ್‌ ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್‌ ಕೆ.ಆ್ಯಂಟನಿ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದ ಸಾರ್ವಭೌಮವನ್ನು ಪ್ರಶ್ನಿಸುವ ಸಾಕ್ಷ್ಯಚಿತ್ರವನ್ನು ಬೆಂಬಲಿಸಿದ್ದಕ್ಕಾಗಿ ಪಕ್ಷದಲ್ಲೇ ಟೀಕೆಗೆ ಗುರಿಯಾಗಿದ್ದೇನೆ. ಹಲವಾರು ನಿಂದನಾತ್ಮಕ ಕರೆಗಳು ಬಂದಿವೆ. ನಾನು ಎಲ್ಲಿಯೇ ಇದ್ದರೂ ಜೀವನ ಮುಂದುವರೆಯುತ್ತದೆ. ಕಾಂಗ್ರೆಸ್ ನ ಎಲ್ಲಾ ಜವಾಬ್ದಾರಿಗಳಿಗೆ ನಾನು ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಕೇರಳ ಘಟಕದ ಡಿಜಿಟಲ್ ಸಂವಹನವನ್ನು ಅನಿಲ್ ಆ್ಯಂಟನಿ ನಿರ್ವಹಿಸುತ್ತಿದ್ದರು.