ಬಿರುಗಾಳಿಗೆ ಸಿಲುಕಿ ಪರದಾಡಿದ ವಿದ್ಯಾರ್ಥಿನಿಯರು…

58
firstsuddi

ಹುಬ್ಬಳ್ಳಿ : ನಗರದಲ್ಲಿ ನಿನ್ನೆ ಸಂಜೆ ಸುರಿದ ಮಳೆ, ಗಾಳಿ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಸ್ಕೂಟಿಯಲ್ಲಿ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿನಿಯರು ಬಿರುಗಾಳಿಗೆ ಸಿಲುಕಿ ಪರದಾಡಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.

ವಿದ್ಯಾರ್ಥಿನಿಯರು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ನೋಡನೋಡುತ್ತಿದ್ದಂತೆ ಗಾಳಿ ಸುತ್ತುವರೆದಿದ್ದು ವಿದ್ಯಾರ್ಥಿನಿಯರು ದ್ವಿಚಕ್ರ ವಾಹನ ಸಮೇತ ಕೆಳಗೆ ಹಾರಿ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಕೂಡಲೇ ವಿದ್ಯಾರ್ಥಿನಿಯರ ಸಹಾಯಕ್ಕೆ ಧಾವಿಸಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ವಿದ್ಯಾರ್ಥಿನಿಯರು ಬಿರುಗಾಳಿಗೆ ಸಿಲುಕಿ ಪರದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.