ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಅದಾನಿ ನಿವ್ವಳ ಆಸ್ತಿ ಮೌಲ್ಯವು 115.5 ಶತಕೋಟಿ ಡಾಲರ್(ಸುಮಾರು 9.2 ಲಕ್ಷ ಕೋಟಿ ರೂ.) ಗೆ ತಲುಪಿದೆ. ಇತ್ತೀಚೆಗೆ ಭಾರತ ಮಾತ್ರವಲ್ಲದೇ ಏಷ್ಯಾದ ಶ್ರೀಮಂತ ವ್ಯಕ್ತಿ ಎಂಬ ಖ್ಯಾತಿಯನ್ನು ಅದಾನಿ ಗಳಿಸಿದ್ದರು.
ಸ್ಪೇಸ್ ಎಕ್ಸ್ ಸಂಸ್ಥಾಪಕ ಎಲೋನ್ ಮಸ್ಕ್ ವಿಶ್ವದ ಸಿರಿವಂತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಅಮೇಜಾನ್ ನ ಜೆಫ್ ಬೆಜೋಸ್, ಮೂರನೇ ಸ್ಥಾನದಲ್ಲಿ ಬರ್ನಾರ್ಡ್ ಅರ್ನಾಲ್ಟ್ ಹಾಗೂ ಲೂಯಿ ವಿಟಾನ್ ಅವರ ಕುಟುಂಬವಿದೆ. ಇದೀಗ ಮೈಕ್ರೋಸಾಫ್ಟ್ ನ ಬಿಲ್ಗೇಟ್ಸ್ ಅವರನ್ನು ಹಿಂದಿಕ್ಕಿ ಅದಾನಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.










