ಬಿಹಾರ ಪ್ರವಾಹದ ಬಗ್ಗೆ ಮಿಡಿದ ಮೋದಿ ಅವರ ಎದೆ ಕರ್ನಾಟಕದ ಪ್ರವಾಹದ ಬಗ್ಗೆ ಕಲ್ಲುಬಂಡೆ ಆಗಿದ್ದು ಯಾಕೆ?- ಸಿದ್ದರಾಮಯ್ಯ ಟ್ವೀಟ್

235
firstsuddi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಬಿಹಾರ ಪ್ರವಾಹದ ಕುರಿತು ಮಾಡಿರುವ ಟ್ವೀಟ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದಾರೆ. ಬಿಹಾರ ಪ್ರವಾಹದ ಬಗ್ಗೆ ಮಿಡಿದ ಪ್ರದಾನಿ ನರೇಂದ್ರ ಮೋದಿ ಅವರ 52 ಇಂಚಿನ ಎದೆ, ಕರ್ನಾಟಕದ ನೆರೆ ಸಂತ್ರಸ್ತರ ಬಗ್ಗೆ ಕಲ್ಲುಬಂಡೆ ಆಗಿದ್ದು ಯಾಕೆ? ಇದು 25 ಸಂಸದರನ್ನು ಆಯ್ಕೆ ಮಾಡಿ ಕಳಿಸಿದ ಕರ್ನಾಟಕದ ಬಗ್ಗೆ ತಾತ್ಸಾರವೇ? ಇಲ್ಲ ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ದ್ವೇಷವೇ? ಎಂದು ಪ್ರಶ್ನಿಸಿದ್ದಾರೆ.