ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ…

56
firstsuddi

ಪಾಟ್ನಾ : ಬಿಹಾರದ ಮುಖ್ಯಮಂತ್ರಿಯಾಗಿ ಸತತ 8 ನೇ ಬಾರಿಗೆ ನಿತೀಶ್ ಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ನಿನ್ನೆಯಷ್ಟೇ ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ನಿತೀಶ್ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಇನ್ನು ಬಿಹಾರದ ಉಪ ಮುಖ್ಯಮಂತ್ರಿಯಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಸಹ ಪ್ರಮಾಣ ವಚನ ಸ್ವೀಕರಿಸಿದ್ದಾರೆ.