ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ.

50
firstsuddi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದರು.

ಬೆಂಗಳೂರು ಹೊರವಲಯ ನೆಲಮಂಗಲದ ಮಾದವಾರದ ಬಿಐಇಎಸ್ ನಲ್ಲಿ, ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 2.30ರ ವರೆಗೂ ಇಂಡಿಯಾ ಎನರ್ಜಿ ವೀಕ್ ಉದ್ಘಾಟನಾ ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ.

2.40ಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿರುವ ನರೇಂದ್ರ ಮೋದಿಯವರು 3.25ಕ್ಕೆ ತುಮಕೂರು ತಲುಪಲಿದ್ದಾರೆ. 3.30ಕ್ಕೆ ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ದೃಷ್ಟಿಯಿಂದ ಹೆಚ್‍ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಚೆನ್ನೈ ಬೆಂಗಳೂರು ಕೈಗಾರಿಕಾ ಕಾರಿಡಾರ್ ನ ಭಾಗವಾದ ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸುವರು.

ನಂತರ ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ ಜೀವನ್ ಅಭಿಯಾನದ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಿಲಾನ್ಯಾಸ ನೆರವೇರಿಸುವರು. 3.30 ರಿಂದ 4.30ರ ವರೆಗೆ ತುಮಕೂರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.40ಕ್ಕೆ ತುಮಕೂರಿನಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿನಿಂದ ಹೊರಟು ಸಂಜೆ 5.15ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವರು. ಸಂಜೆ 5.20ಕ್ಕೆ ವಾಯುಪಡೆ ವಿಮಾನದ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ.