ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​ನ 19ನೇ ಫ್ಲೋರ್‌ನಿಂದ ಬಿದ್ದು ಯುವಕ ಆತ್ಮಹತ್ಯೆ…

47
firstsuddi

ಬೆಂಗಳೂರು: ನಗರದ ಮಾಧವನಗರದಲ್ಲಿರುವ ಪ್ರತಿಷ್ಠಿತ ರೆನೈಸನ್ಸ್ ಹೋಟೆಲ್​ನ 19ನೇ ಫ್ಲೋರ್‌ನಿಂದ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಮಿಳುನಾಡು ಮೂಲದ ಶರಣ್ (28) ಎಂದು ತಿಳಿದುಬಂದಿದೆ. ಈತ ನಿನ್ನೆ ಹೋಟೆಲ್‌ಗೆ ಬಂದು ಚೆಕ್ ಇನ್ ಆಗಿದ್ದು, ಬ್ಯುಸಿನೆಸ್ ವಿಚಾರವಾಗಿ ಬಂದಿರುವುದಾಗಿ ರಿಸೆಪ್ಷನ್ ಬುಕ್‌ನಲ್ಲಿ ಎಂಟ್ರಿ ಮಾಡಿದ್ದ. ಈ ಹಿಂದೆ ಕೂಡ ಈತ ಹೋಟೆಲ್‌ಗೆ ಬಂದು ಉಳಿದುಕೊಂಡಿದ್ದ. ಈ ಬಾರಿ ಎರಡು ದಿನ ಉಳಿಯೋದಾಗಿ ಹೋಟೆಲ್ ಸಿಬ್ಬಂದಿಗೆ ಹೇಳಿದ ಈತ ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ 19ನೇ ಫ್ಲೋರ್‌ನ ಬಾಲ್ಕನಿಗೆ ಬಂದು ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.