ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯ ಮೇಲ್ಛಾವಣಿ ಕುಸಿತ…

53
firstsuddi

ಬೆಂಗಳೂರು: ನಿರ್ಮಾಣ ಹಂತದ ಖಾಸಗಿ ಆಸ್ಪತ್ರೆಯ ಮೇಲ್ಛಾವಣಿ ಕುಸಿತಗೊಂಡಿದ್ದು, ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದಾರೆ. ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ.

ನೃಪತುಂಗ ರಸ್ತೆಯಲ್ಲಿರುವ ಸೆಂಟ್ ಮಾರ್ಥಾಸ್ ಆಸ್ಪತ್ರೆ ನವೀಕರಣ ಕಾಮಗಾರಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಬಂದ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಆದರೆ ಕೆಲಸ ಮಾಡುತ್ತಿರುವಾಗ ಮೇಲ್ಛಾವಣಿ ಕುಸಿದಿದೆ.

ಘಟನೆಯಲ್ಲಿ ರಪೀಸಾಬ್, ಬಸವರಾಜು ಇಬ್ಬರು ಕಾರ್ಮಿಕರು ಮೇಲ್ಚಾವಣಿ ಕೆಳಗೆ ಸಿಲುಕಿದ್ದಾರೆ. ನಿರ್ಮಾಣ ಹಂತದ ಮೇಲ್ಛಾವಣಿ ಕುಸಿತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.