ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಮಾಡಲ್ಲ : ಆರಗ ಜ್ಞಾನೇಂದ್ರ ಸ್ಪಷ್ಟನೆ…

51
firstsuddi

ಬೆಂಗಳೂರು : ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.